October 24, 2025
WhatsApp Image 2024-01-20 at 2.59.55 PM

ಹಾವೇರಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಏಳು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂದೂ ವ್ಯಕ್ತಿಯೊಬ್ಬನ ಜೊತೆ ಮುಸ್ಲಿಂ ಯುವತಿ ಇದ್ದಳು ಎಂದು ಮುಸ್ಲಿಂ ಯುವತಿಯ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ. ಸಹೋದ್ಯೋಗಿ ಜಗದೀಶ್ ಎಂಬ ವ್ಯಕ್ತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬ್ಯಾಡಗಿ ಪಟ್ಟಣದ ಪುರಸಭೆಯ ಬಳಿ ಈ ಘಟನೆ ನಡೆದಿದ್ದು, ಸಾರ್ವಜನಿಕ ಸ್ಥಳದಲ್ಲೇ ಯುವತಿಯ ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, 7 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

About The Author

Leave a Reply