ಮಂಗಳೂರಿನಲ್ಲಿ ಮೊದಲ ಬಾರಿಗೆ ಪತ್ತೆಯಾದ ಆಲಿವ್ ರಿಡ್ಲೆ ಮೊಟ್ಟೆ
ಮಂಗಳೂರು: ಮಂಗಳೂರಿನ ಕಡಲತೀರದಲ್ಲಿ ಮೊದಲಬಾರಿಗೆ ಕಡಲತೀರಕ್ಕೆ ಬಂದು ಮೊಟ್ಟೆಗಳನ್ನಿಟ್ಟು ಹೋಗುವ ವಿಶಿಷ್ಟ ಬದುಕಿನ ಆಲಿವ್ ರಿಡ್ಲೆ ಕಡಲಾಮೆ ಮೊಟ್ಟೆಗಳು ಮಂಗಳೂರಿನಲ್ಲಿ ಪತ್ತೆಯಾಗಿವೆ.
ಸುರತ್ಕಲ್ ಆಸುಪಾಸಿನ ಕಡಲತೀರದ ಬಳಿಯ ಮೂರು ಕಡೆಗಳಲ್ಲಿ ಆಲಿವ್ ರಿಡ್ಲೆ ಅಮೆಗಳು ಬಂದು ಮೊಟ್ಟೆ ಇರಿಸಿ ಹೋಗಿರುವುದನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಮಾಡಿದ್ದು, ಸಂರಕ್ಷಣೆಗೂ ಕ್ರಮ ತೆಗೆದುಕೊಳ್ಳಲಾಗಿದೆ.ಈ ಮೊದಲು ಮಂಗಳೂರಿನಲ್ಲಿ ಎಲ್ಲಿಯೂ ಆಲಿವ್ ರಿಡ್ಲೆ ಮೊಟ್ಟೆಗಳು ಕಂಡು ಬರಲಿಲ್ಲ ಆದ್ದರಿಂದ ಹಾಗಾಗಿ ಅರಣ್ಯ ಇಲಾಖೆ ಈ ಬಾರಿ ಮೂರು ಸಮುದ್ರಗಳಲ್ಲಿ ಮಾನವ ಚಟುವಟಿಕೆ ಮೇಲೆ ನಿಯಂತ್ರಣ ಇದ್ದ ಕಾರಣ ಅದೇ ಸಮುದ್ರದಲ್ಲಿ ಮೊಟ್ಟೆ ಇರಿಸಿರುವುದು ಪತ್ತೆಯಾಗಿದೆ. ಅವುಗಳಲ್ಲಿ ಎರಡು ಕಡೆ ಜೋರಾದ ಅಲೆಗಳು ಬಡಿಯುವ ಕಾರಣ ಅವುಗಳನ್ನು ಅಲ್ಲಿಂದ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ.