Visitors have accessed this post 641 times.

ಮಂಗಳೂರು: ಅಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ – ದ.ಕ ಜಿಲ್ಲೆಯಲ್ಲಿ ಪೊಲೀಸ್‌ ಬಂದೋಬಸ್ತ್

Visitors have accessed this post 641 times.

ಮಂಗಳೂರು: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ಕೆಳಕಂಡ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ. 131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಗರದಾದ್ಯಂತ 57 ಸೆಕ್ಟರ್ ಮೊಬೈಲ್ 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ. 14 ಸ್ಥಳಗಳಲ್ಲಿ ಚೆಕ್ ಪಾಯಿಂಟ್ ಗಳನ್ನು ನಿಯೋಜಿಸಲಾಗಿದೆ. 9 ಸಿಎಆರ್ ಮತ್ತು 3 ಕೆಎಸ್ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ. ಮಂಗಳೂರು ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಧ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಅಳವಡಿಸಲಾದ ಕ್ರಮದಂತೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ್ಯಾಲಿಗಳಿಗೆ ಅನುಮತಿ ನೀಡಿರುವುದಿಲ್ಲ. ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಯಾ ಎ.ಸಿ.ಪಿ ರವರ ಮಾರ್ಗದರ್ಶನದಲ್ಲಿ ಈಗಾಗಲೇ ಶಾಂತಿ ಸಭೆಗಳನ್ನು ಆಯೋಜಿಸಲಾಗಿರುತ್ತದೆ. ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತು ರೂಟ್ ಮಾರ್ಚ್ ಕೈಗೊಳ್ಳಲಾಗಿದೆ. ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾದಿಸಿ ಫ್ಲೆಕ್ಸ್, ಬ್ಯಾನರ್ ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ ಮತ್ತು ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 21-01-2024ರ ಮದ್ಯರಾತ್ರಿಯಿಂದ ದಿನಾಂಕ: 23-01-2024 ರ ಮುಂಜಾನೆಯ ವರೆಗೆ ನಗರದಲ್ಲಿರುವ ಎಲ್ಲಾ ರೀತಿಯ ಬಾರ್ ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಗಳೂರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 3-ಡಿಸಿಪಿ, ೦6-ಎಸಿಪಿ, 11-ಪಿ.ಐ ಮತ್ತು 37-ಪಿ.ಎಸ್.ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.

Leave a Reply

Your email address will not be published. Required fields are marked *