ಶಿವಮೊಗ್ಗದಲ್ಲಿ ‘ರಾಮ ಮಂದಿರ ಉದ್ಘಾಟನೆ’ ಸಂಭ್ರಮದ ವೇಳೆ ‘ಅಲ್ಲಾ ಹು ಅಕ್ಬರ್‌’ ಘೋಷಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಮಾರಂಭದ ಸಂಭ್ರಮಾಚರಣೆಯ ವೇಳೆಯಲ್ಲೇ ಬುರ್ಖಾ ಧರಿಸಿದ್ದಂತ ಮಹಿಳೆಯೊಬ್ಬರು ಅಲ್ಲಾ ಬು ಅಕ್ಬರ್ ಘೋಷಣೆ ಕೂಗಿರೋ ಘಟನೆ ನಡೆದಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕೋಟ್ಯಂತರ ಹಿಂದೂಗಳ ಆರಾಧ್ಯ ದೈವ ಶ್ರೀ ರಾಮನನ್ನು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರಿಂದ ನಡೆದಂತ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವವನ್ನು ಜೈ ಶ್ರೀರಾಮ ಘೋಷಣೆಯ ಮೂಲಕ ಭಕ್ತ ವೃಂದ ಕಣ್ ತುಂಬಿಕೊಂಡಿದೆ.

ಇದೇ ಹೊತ್ತಿನಲ್ಲಿ ಶಿವಮೊಗ್ಗದಲ್ಲಿ ನಡೆದ ಸಂಭ್ರಮಾಚರಣೆಯ ವೇಳೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಯಾಕೆಂದ್ರೆ ರಾಮ ಮಂದಿರ ಉದ್ಘಾಟನೆ ಸಮಾರಂಭದ ಸಂಭ್ರಮಾಚರಣೆ ವೇಳೆ ಬುರ್ಖಾ ಧರಿಸಿದ್ದಂತ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದೇ ಆಗಿದೆ.

ಹೀಗೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದಂತ ಮಹಿಳೆಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆಯ ಕುರಿತಂತೆ ಮಾಹಿತಿ ಹಂಚಿಕೊಂಡಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ವಿಚಾರಣೆ ವೇಳೆಯಲ್ಲಿ ಮಹಿಳೆ ಮಾನಸಿಕ ಅಸ್ವಸ್ಥಳೆಂದು ತಿಳಿದು ಬಂದಿದೆ. ಈ ಬಗ್ಗೆ ಅವರ ತಂದೆ ಪೂರಕ ದಾಖಲೆ ಒದಗಿಸಿದ್ದಾರೆ. ಎಲ್ಲಾ ಆಯಾಮಗಳಿಂದಲೂ ತನಿಖೆಯನ್ನು ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

Leave a Reply