November 8, 2025
WhatsApp Image 2024-01-23 at 9.55.56 AM

ಬಂಟ್ವಾಳ: ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣದ ಆರೋಪಿಗಳಾದ 7 ಜನರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್ ಎಲ್. ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ @ ಪ್ರವೀಣ್ (36), ಸುಧೀರ್ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದ ನಿವಾಸಿ ಪ್ರಸ್ತುತ ಚಿಕ್ಕಮಗಳೂರಿನ ಗೌರಿ ಕಾಲುವೆಯಲ್ಲಿ ವಾಸವಾಗಿದ್ದ ಮಹಮ್ಮದ್ ಹನೀಫ್ (49) ಎಂದು ಗುರುತಿಸಲಾಗಿದೆ.

ಇನ್ನು ಬಂಧಿತರಿಂದ ದರೋಡೆಗೈದ 3.15 ಲಕ್ಷ ಮೌಲ್ಯದ 54 ಗ್ರಾಂ ಚಿನ್ನಾಭರಣ ಹಾಗೂ ರೂ. 8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ. 2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜ.11 ರ ಗುರುವಾರದಂದು ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಂಚಿಕಟ್ಟೆ ಮೇನಾಡು ನಿವಾಸಿ ಮರೀಟಾ ಸಿಂಥಿಯಾ ಪಿಂಟೋ ಎಂಬವರ ಮನೆಗೆ ಬಂದ ಮುಸುಕುದಾರಿಗಳು ಮನೆಯ ಬೆಲ್ ಮಾಡಿದ್ದರೆ. ಈ ವೇಳೆ ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಹಾಗೂ ಮಗಳು ಮರಿಟಾ ಪಿಂಟೋ ಮಾತ್ರ ಇದ್ದು, ಬೆಳಿಗ್ಗೆ 6.15 ಗಂಟೆಗೆ ಬೆಲ್ ಹಾಕಿದಕ್ಕೆ ಮನೆಯ ಬಾಗಿಲು ತೆರದಿದ್ದಾರೆ. ಬಾಗಿಲು ತೆರೆದ ಕೂಡಲೇ ಮುಸುಕುದಾರಿಗಳು ಮನೆಯೊಳಗೆ ನುಗ್ಗಿ, ಚೂರಿ ತೋರಿಸಿ ಗೊದ್ರೇಜ್ ಕೀ ನೀಡುವಂತೆ ಹೆದರಿಸಿದ್ದಾರೆ, ನೀಡದಿದ್ದರೆ ಕೊಲ್ಲುವ ಬೆದರಿಕೆ ಹಾಕಿದ್ದರು.

ಬೆದರಿಕೆಗೆ ಒಳಗಾದ ಮರಿಟಾ ಪಿಂಟೋ ಕೀ ನೀಡಿದ್ದಾರೆ. ಕೀ ಪಡೆದುಕೊಂಡ ಮುಸುಕುದಾರಿಗಳು ಕಳ್ಳರು ಗೊದ್ರೇಜ್ ನಲ್ಲಿದ್ದ ಚಿನ್ನ ಹಾಗೂ ನಗದು ಹಣವನ್ನು ದೋಚಿದ್ದಾರೆ. ಈ ಸಂದರ್ಭದಲ್ಲಿ ಮರಿಟಾ ಪಿಂಟೊ ಹಾಗೂ ಮುಸುಕುದಾರಿಗಳ ನಡುವೆ ಗಲಾಟೆ ನಡೆದಿದ್ದು, ಅವರ ಕೈಗೆ ಗಾಯವಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಮಂಗಳೂರು ಎಸ್.ಪಿ.ರಿಷ್ಯಂತ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣವನ್ನು ಪತ್ತೆ ಹಚ್ಚಲು ಮೂರು ವಿಶೇಷ ತಂಡವನ್ನು ರಚನೆ ಮಾಡಿದ್ದರು.

About The Author

Leave a Reply