Visitors have accessed this post 395 times.

‘ಕಾಂಗ್ರೆಸ್ ಕಾರ್ಯಕರ್ತರು ಯಾರಿಗೂ ಹೆದರುವುದಿಲ್ಲ’- ರಾಹುಲ್‌

Visitors have accessed this post 395 times.

ಗುವಾಹಟಿ: ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಮಂಗಳವಾರ ಗುವಾಹಟಿ ನಗರಕ್ಕೆ ಪ್ರವೇಶಿಸಿದಂತೆ ತಡೆಹಿಡಿಯಲಾಗಿದ್ದು, ಇದನ್ನು ಖಂಡಿಸಿ ಬ್ಯಾರಿಕೇಡ್‌ಗಳನ್ನು ಮುರಿದು ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಾವು ದುರ್ಬಲರು ಎಂದು ನೀವು ಭಾವಿಸಬಾರದು. ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ ಹೊರತು ಕಾನೂನು ಮುರಿದಿಲ್ಲ ಎಂದು ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡತ್ತಾ ಹೇಳಿದರು.

ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅದೇ ಮಾರ್ಗದಲ್ಲಿ ಸಾಗಿದ್ದು, ನಮಗೆ ಮಾತ್ರ ಯಾತ್ರೆ ಸಾಗಲು ಅವಕಾಶ ನೀಡಲಿಲ್ಲ ಎಂದರು.
ವಿಶ್ವವಿದ್ಯಾನಿಲಯದಲ್ಲಿ ನನ್ನ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ, ಆದರೆ ವಿದ್ಯಾರ್ಥಿಗಳು ನನ್ನ ಮಾತನ್ನು ಹೊರಗೆ ನಿಂತು ಕೇಳಿದರು ಎಂದರು.
ಕಾಂಗ್ರೆಸ್ ಕಾರ್ಯಕರ್ತರು ಯಾರಿಗೂ ಹೆದರುವುದಿಲ್ಲ., ಅಸ್ಸಾಂನಲ್ಲಿ ಬಿಜೆಪಿಯನ್ನು ಸೋಲಿಸಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *