ಉಳ್ಳಾಲ: ನೇತ್ರಾವತಿ ಸೇತುವೆ ಡಿವೈಡರ್ ಗೆ ಗುದ್ದಿದ ಬೈಕ್- ಸವಾರ ಸಾವು

ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.

ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು‌. ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ ವಾಪಸ್ಸಾಗುತ್ತಿದ್ದ ಸಂದರ್ಭ ತಡರಾತ್ರಿ 1.30 ಗಂಟೆ ಸುಮಾರಿಗೆ ಬೈಕ್ ಡಿವೈಡರ್ ಗೆ ಬಡಿದು ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Leave a Reply