Visitors have accessed this post 306 times.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Visitors have accessed this post 306 times.

ಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳು ಕರ್ನಾಟಕದವರಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು.

ಹಿಂದಿನ ವರ್ಷದ ಅಂತಿಮ ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು. ವಿದ್ಯಾರ್ಥಿಯ ಪಾಲಕರ ಅಥವಾ ಪೋಷಕರ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ. 2.00 ಲಕ್ಷಗಳಿಗಿಂತ ಮೀರಿರಬಾರದು ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ 2.50 ಲಕ್ಷಗಳಿಗಿಂತ ಮೀರಿರಬಾರದು.

ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು State Scholarship Portal ನ ವೆಬ್ಸೈಟ್ https://ssp.karnataka.gov.in ಅಥವಾ https:// dom.karnataka.gov.in (Directorate of Minorities-GOK) ನ ಮೂಲಕ ಜ.30 ರೊಳಗಾಗಿ ಸಲ್ಲಿಸುವಂತೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಾಲೂಕು ಅಥವಾ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಭೇಟಿ ನೀಡಬಹುದಾಗಿದೆ .

Leave a Reply

Your email address will not be published. Required fields are marked *