
ಪುತ್ತೂರು: ಟೆಂಪೋ ಚಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಲಡ್ಕ ಎಂಬಲ್ಲಿ ಗುರುವಾರ ನಡೆದಿದೆ.
ಮೃತ ಚಾಲಕನನ್ನು ಯಾದವ ಯಾನೆ ರವೀಂದ್ರ (45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಿನಿ ಟೆಂಪೋ ಚಾಲಕರಾಗಿದ್ದ ಅವರು ಮನೆಯಿಂದ ಸ್ವಲ್ಪ ದೂರದಲ್ಲಿ ತನ್ನ ಟೆಂಪೋ ನಿಲ್ಲಿಸಿ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.