ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸುವ ಮೂಲಕ ರಾಜಕೀಯ ಭಾಷಣ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ
ಬೆಳ್ತಂಗಡಿ ತಾಲೂಕು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿದರು, ಬಳಿಕ ಕಾಂಗ್ರೆಸ್ ವಿರುದ್ದ ವಾಗ್ದಾಳಿ ಪ್ರಾರಂಭಿಸಿದ ಅವರು, ಬಿ.ಆರ್.ಅಂಬೇಡ್ಕರ್ ಆಶಯದಂತೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಭಾರತದ ಸಂವಿಧಾನದ ಮೂಲ ಪ್ರತಿಯಲ್ಲಿ ರಾಮಾಯಣದ ಉಲ್ಲೇಖವಿದೆ. ಮೂಲ ಪ್ರತಿಯ ಮೊದಲ ಪುಟದಲ್ಲಿ ರಾಮ, ಸೀತೆ, ಲಕ್ಷ್ಮಣರ ಭಾವಚಿತ್ರ ಇದೆ. ಅಂಬೇಡ್ಕರ್ ರಚಿಸಿದ ಮೂಲ ಸಂವಿಧಾನದ ರಚನೆಯಲ್ಲಿ ಇದೆ ಎಂದರು ಅಲ್ಲದೆ ಮೂಲಭೂತ ಹಕ್ಕುಗಳನ್ನು ವಿವರಿಸುವಾಗ ರಾಮ, ಸೀತೆ, ಲಕ್ಷ್ಮಣರ ಭಾವಚಿತ್ರ ಇಟ್ಟು, ಈ ಮೂಲಕ ರಾಮನೇ ಜನರ ಹಕ್ಕು ರಕ್ಷಿಸುವ ರಕ್ಷಕ ಎಂದು ಅಂಬೇಡ್ಕರ್ ಸಾರಿದ್ದಾರೆ ಎಂದ ಅವರು . ಇದು ಬಹಳ ಸ್ಪಷ್ಟವಾಗಿ ರಾಮರಾಜ್ಯ ಮತ್ತು ರಾಮ ಈ ದೇಶಕ್ಕೆ ಪೂರಕ ಅಂದಿದ್ದಾರೆ. ಆದರೆ ಈ ದೇಶದಲ್ಲಿ 65 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ರಾಮನ ಪ್ರತಿಷ್ಠೆ ಬಹಿಷ್ಕಾರ ಮಾಡುತ್ತೆ. ಗಾಂಧೀಜಿಯವರ ರಾಮ ಬೇಕು, ನಿಮ್ಮ ರಾಮ ಬೇಡ ಅಂದಿದ್ದಾರೆ. ಆದರೆ ವಾಲ್ಮೀಕಿ ನಂಬಿದ, ಗಾಂಧೀಜಿ ಹೇಳಿದ, ಹಿಂದೂ ಸಮಾಜದ ಮರ್ಯಾದ ಪುರುಷೋತ್ತಮ ರಾಮ ಹುಟ್ಡಿದ್ದು ಅಯೋಧ್ಯೆಯಲ್ಲಿ, ಆದರೆ ಕಾಂಗ್ರೆಸ್ ನಾಯಕರ ಹೊರತುಪಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪೂಜಿಸೋ ರಾಮ ಹುಟ್ಟಿದ್ದು ಕೂಡ ಅಯೋಧ್ಯೆಯಲ್ಲಿ ,ಆದರೆ ಕಾಂಗ್ರೆಸ್ ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ತಾ ಇದಾರೆ ಎಂದು ಆರೋಪಿಸಿದ ಅವರು ಸಂವಿಧಾನ ವಿರೋಧಿ ಪಕ್ಷ ಈ ದೇಶದಲ್ಲಿ ಇದ್ದರೆ ಅದು ಕಾಂಗ್ರೆಸ್ ಪಕ್ಷ ಎಂದರು
ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದೆ, ವಿವೇಕಾನಂದರ ವಿಶ್ವ ವಂದ್ಯ ಭಾರತದ ಹೊಸ್ತಿಲಲ್ಲಿ ನಾವಿದ್ದೇವೆ. ಅಭಿವೃದ್ಧಿ ವಂಚಿತ ಕರ್ನಾಟಕ ಇದೆ, ಅಭಿವೃದ್ಧಿ ಮಾಡದ ಸರ್ಕಾರ ಇದು ಎಂದು ರಾಜ್ಯ ಸರಕಾರದ ವಿರುದ್ದ ಹರಿಹಾಯ್ದರು.