August 30, 2025
WhatsApp Image 2024-01-27 at 9.20.14 AM

ಮಂಗಳೂರು:ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ ಪ್ರಕರಣ ಇಂದು ನಡೆದಿದೆ.

ನಗರದ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಇಂದು ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಳಿಗ್ಗೆ 7 ಗಂಟೆಗೆ ಧ್ವಜಾರೋಹಣವನ್ನು ಅಪಾಟ್೯ಮೆಂಟ್ ನ ಹಿರಿಯ ನಾಗರೀಕರಾದ, ನಿವೃತ್ತ ಸರಕಾರಿ ಅಧಿಕಾರಿ ಅಬ್ದುಲ್ ಸಮದ್ (80) ಅವರು ಧ್ವಜಾರೋಹಣ ನಡೆಸಿದ್ದರು.

ನಂತರ ಭಾಷಣವನ್ನೂ ಮಾಡಿದ್ದ ಅವರು ಕಾರ್ಯಕ್ರಮ ಮುಗಿದ ಬಳಿಕ ಎಲ್ಲರಿಗೂ ಹಸ್ತಲಾಘವ ಮಾಡಿ, ಮನೆಗೆ ಲಿಫ್ಟ್ ನಲ್ಲಿ ತೆರಳಿದ್ದರು.
ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿಂದಂತೆ ಕುಸಿದು ಬಿದ್ದರು. ತಕ್ಷಣವೇ ಅಕ್ಕಪಕ್ಕದ ನಿವಾಸಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಯಿತು.

ಮೂಲತ: ಕುಂದಾಪುರ ಗಂಗೊಳ್ಳಿ ನಿವಾಸಿಯಾಗಿರುವ ಅವರ ಮೃತದೇಹವನ್ನು ನಂತರ ಊರಿಗೆ ಕೊಂಡೊಯ್ಯಲಾಯಿತು.

About The Author

Leave a Reply