November 8, 2025
WhatsApp Image 2024-01-27 at 3.04.00 PM
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಸಮೀಪದ ಮಿಲ್ಲತ್ ನಗರದ ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿ ವೀಡಿಯೊ ಚಿತ್ರೀಕರಣ ಮಾಡಿದ ಆರೋಪದಲ್ಲಿ ಹನುಮಂತ ಎಂಬಾತನನ್ನು ಬಂಧಿಸಲಾಗಿದೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಒಂದು ಗಂಟೆ ಸುಮಾರಿಗೆ ಮಸೀದಿಯೊಳಗೆ ಪ್ರವೇಶಿಸಿದ್ದ ಆರೋಪಿಯು ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ. ಮದ್ಯ ಸೇವನೆ ಮಾಡಿ ತೂರಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯವನಾಗಿರುವ ಆರೋಪಿಯು 20 ದಿನಗಳ ಹಿಂದೆ ಕೆಲಸ ಅರಸಿಕೊಂಡು ಮಂಗಳೂರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.
ಆರೋಪಿಯ ವಿರುದ್ಧ ಸೆ.447, 295, 295(ಎ) ನಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಆಯುಕ್ತರು ತಿಳಿಸಿದ್ದಾರೆ.

About The Author

Leave a Reply