Visitors have accessed this post 395 times.
ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ರಸ್ತೆ ಬದಿ ಕಸಗುಡಿಸುವ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ.
ಮಂಗಳೂರಿನಿಂದ ಕುಂದಾಪುರ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ಎದುರಿನಲ್ಲಿದ್ದ ನವಯುಗ ಕಂಪೆನಿಯ ಕಸಗುಡಿಸುವ ವಾಹನಕ್ಕೆ ಡಿಕ್ಕಿಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿ ಚರಂಡಿ ಸಮೀಪ ಬಂದು ನಿಂತಿದೆ.
ಎರಡು ಅಡಿ ಮುಂದೆ ಸಾಗುತ್ತಿದ್ದರೆ ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮುಂದೆ ಇದ್ದ ಮನೆ ಮೇಲೆ ಬೀಳುವ ಅಪಾಯ ಇತ್ತೆನ್ನಲಾಗಿದೆ. ಈ ದುರಂತ ಸ್ವಲ್ಪದರಲ್ಲೇ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.