Visitors have accessed this post 775 times.
ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ಕಚೇರಿಯ ಎದುರೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.
28 ವರ್ಷದ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಕಲ್ಲು ಎತ್ತಿಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರಲ್ಲೇ ಈ ಘಟನೆ ನಡೆದಿದೆ.
ರಾತ್ರಿ ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡಿ ಬಳಿಕ ಯುವಕನನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪಿಯಲ್ಲಿ ಘಟನೆ ನಡೆದಿದೆ.