Visitors have accessed this post 369 times.
ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮೊದಲು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆ ಬಳಿಕ ಅದನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫೆ.17ರಂದು ನಡೆಸಲು ತೀರ್ಮಾನಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದೆ” ಎಂದು ತಿಳಿಸಿದ್ದಾರೆ.