
ನವದೆಹಲಿ : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಮಹಿಳೆಯರಿಗೆ ‘ಲಖ್ಪತಿ ದೀದಿ ಯೋಜನೆ’ ಘೋಷಣೆ ಮಾಡಿದ್ದು, ಲಕ್ಷಾಂತರ ಮಹಿಳೆಯರು ಲಕ್ಷಾಧಿಪತಿಯಾಗಲಿದ್ದಾರೆ.



2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.
ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು, ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ. ಈ ಮೂಲಕ ಪ್ರವಾಸೋದ್ಯಮ ಅಭಿವೃದ್ದಿ ಮಾಡಲಾಗುವುದು ಎಂದು ಅವರು ಹೇಳಿದರು.