ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಹೈಲೆಟ್ಸ್ ಹೀಗಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 6 ನೇ ಬಾರಿಗೆ ಮಧ್ಯಂತರ ಬಜೆಟ್ 2024 ಮಂಡಿಸಿದ್ದಾರೆ.

ಕೇಂದ್ರ ಸರ್ಕಾರದ ಬಜೆಟ್ ನ ಹೈಲೆಟ್ಸ್

* ಆಯುಷ್ಮಾನ್ ಭಾರತ್ ಆಯುಷ್ಮಾನ್ ಭಾರತ್ ಅಡಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ ವಿಸ್ತರಿಸಲಾಗುವುದು

*ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ

*ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು.

*ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ, ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

*ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ- 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ ಕೈಗೊಂಡಿದ್ದೇವೆ, ಮೆಟ್ರೋ, ವಂದೇ ಭಾರತ್ ರೈಲಿಗೆ ಹೆಚ್ಚಿನ ಒತ್ತು.

*ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ.

*2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ. -ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ.

*ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ.

*ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ, ಸರ್ಕಾರ 5 ಇಂಟಿಗ್ರೇಟೆಡ್ ಆಕ್ವಾ ಪಾರ್ಕ್ಗಳನ್ನು ತೆರೆಯಲಿದೆ.

*ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು.

*ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂದರು.

*ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ.

*ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ .

*ಆದಾಯ ತೆರಿಗೆ ಸ್ಲ್ಯಾಬ್ನಲ್ಲಿ ಯಾವುದೇ ಬದಲಾವಣೆ ಇಲ್ಲ. -ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ.

ಈ ಬಾರಿ ನಿರ್ಮಲಾ ಸೀತಾರಾಮನ್ ಕೇವಲ 1 ಗಂಟೆಗಳ ಕಾಲ ಬಜೆಟ್ ಮಂಡಿಸಿರುವುದು ಆಶ್ಚರ್ಯ ಮೂಡಿಸಿದೆ. 2022ರಲ್ಲಿ 92 ನಿಮಿಷಗಳ ಬಜೆಟ್ ಮಂಡಿಸಿದ್ದರು.

Leave a Reply