Visitors have accessed this post 206 times.

ಜ್ಞಾನವಾಪಿ ಮಸೀದಿಯಲ್ಲಿ ‘ಪೂಜೆ’ ಮುಂದುವರಿಕೆಗೆ ಹೈಕೋರ್ಟ್ ಆದೇಶ

Visitors have accessed this post 206 times.

 ಜ್ಞಾನವಾಪಿ ಮಸೀದಿಯ ವ್ಯಾಸ್ ನೆಲಮಾಳಿಗೆಯಲ್ಲಿ ಹಿಂದೂ ಪ್ರಾರ್ಥನೆಗೆ ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಾಲಯವು ತನ್ನ ಅರ್ಜಿಯನ್ನು ತಿದ್ದುಪಡಿ ಮಾಡಿ ಫೆಬ್ರವರಿ 6 ರಂದು ಹಿಂತಿರುಗುವಂತೆ ಮುಸ್ಲಿಂ ಕಡೆಯವರಿಗೆ ಸೂಚಿಸಿದೆ.

 

ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಜ್ಞಾನವಾಪಿ ಮಸೀದಿ ಆವರಣದ ಒಳಗೆ ಮತ್ತು ಹೊರಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಡ್ವೊಕೇಟ್ ಜನರಲ್ಗೆ ಆದೇಶಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 6 ರಂದು ನಡೆಯಲಿದೆ.

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆ ನಡೆಸಲು ಅನುಮತಿ ನೀಡಿದ ಜಿಲ್ಲಾ ನ್ಯಾಯಾಧೀಶರ ಆದೇಶವನ್ನ ಪ್ರಶ್ನಿಸಿ ಮಸೀದಿ ಸಮಿತಿಯು ಈ ಹಿಂದೆ ಸುಪ್ರೀಂ ಕೋರ್ಟ್’ನ್ನ ಸಂಪರ್ಕಿಸಿತ್ತು. ಆದಾಗ್ಯೂ, ಸುಪ್ರೀಂ ಬದಲಿಗೆ ಅಲಹಾಬಾದ್ ಹೈಕೋರ್ಟ್ ಸಂಪರ್ಕಿಸುವಂತೆ ಮಸೀದಿ ಸಮಿತಿಗೆ ತಿಳಿಸಲಾಯಿತು.

Leave a Reply

Your email address will not be published. Required fields are marked *