
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಗನ ಸಖೀ ಯೋರ್ವಳು ದಾರುಣ ಅಂತ್ಯ ಕಂಡಿದ್ದಾಳೆ.ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಹುಬ್ಬಳ್ಳಿ ಮೂಲದ ಕಾಜೋಲ್ ಶಿಯಾನಿ ಎಂದು ಗುರುತ್ತಿಸಲಾಗಿದೆ. ದುರ್ಘಟನೆಯಲ್ಲಿ ರೀತು ಪಾಟೀಲ ಎಂಬ ಯುವತಿ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಒಂದೇ ಕಾರಿನಲ್ಲಿ ಐದು ಜನ ಬೆಳಗಾವಿ ಏರ್ಪೋರ್ಟ್ನಿಂದ ಉದ್ಯೋಗಿಗಳು ಪ್ರಯಾಣ ಬೆಳೆಸಿದ್ದರು. ಊಟ ಮುಗಿಸಿ ಮನೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾಜೋಲ್ ಶಿಯಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


