Visitors have accessed this post 386 times.

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌: ‘ಅಶ್ವಮೇಧ ಕ್ಲಾಸಿಕ್’ ಬಸ್ ಗಳಿಗೆ ಇಂದು ಸಿಎಂ ಚಾಲನೆ

Visitors have accessed this post 386 times.

ಬೆಂಗಳೂರು : ರಾಜ್ಯ ಸರ್ಕಾರ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಯೋಜನೆ ಜಾರಿ ಮಾಡಿದೆ ಅದರಂತೆ ಇದೀಗ 100 ಬಸ್ಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡುತ್ತಿದ್ದು ಅವುಗಳಿಗೆ ಅಶ್ವಮೇಧ ಕ್ಲಾಸಿಕ್ ಎಂದು ಹೆಸರಿಡಲಾಗಿದೆ ಇದರಲ್ಲೂ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಇರಲಿದೆ ಎಂದು ಹೇಳಲಾಗುತ್ತಿದೆ.

ಕೆಎಸ್‌ಆರ್ಟಿಸಿಯ ನೂರು ಹೊಸ ಬಸ್ ಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.ಈ ಮೂಲಕ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕೆಂಗೇರಿಯ ಕೆಎಸ್‌ಆರ್ಟಿಸಿ ವರ್ಕ್ ಶಾಪ್ ಗೆ ಹೊಸ ಬಸ್ಗಳು ಈಗಾಗಲೇ ಬಂದಿಳಿದಿವೆ. ಕೆಎಸ್‌ಆರ್ಟಿಸಿಗೆ ಇನ್ನು ಹೊಸ ಸಾವಿರ ಬಸ್ಸಗಳು ಬರಲಿವೆ ಎಂದು ಹೇಳಲಾಗುತ್ತಿದೆ.

ಹೊಸ ಬಸ್ ಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅವರ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಈ ಒಂದು ಬಸ್ಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬಸ್ ವಿಶೇಷತೆ ಏನು?

ಹೊಸ ಬಸ್ಗಳಿಗೆ ಅಶ್ವಮೇಧ ಕ್ಲಾಸಿಕ್ ಎಂದು ನಾಮಕರಣ ಮಾಡಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ ಪ್ಯಾನಿಕ್ ಬಟನ್, ಜಿಪಿಎಸ್ ಗಳನ್ನು ಅಳವಡಿಕೆ ಮಾಡಲಾಗಿದೆ. ಎರಡು ರೇರ್ ಕ್ಯಾಮೆರಾ, ಮೊಬೈಲ್ ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಕೂಡ ಮಾಡಲಾಗಿದೆ, 52 ಬಜೆಟ್ ಹಾಸನ ಬಸ್ ಒಳಗೆ ಮತ್ತು ಹೊರಗೆ ಎಲ್‌ಇಡಿ ಮಾರ್ಗಫಲಕಗಳನ್ನು ಕೂಡ ಅಳವಡಿಸಲಾಗಿದೆ.ಎಲ್ಲಾ ಜಿಲ್ಲಾ ಕೇಂದ್ರಗಳಿಂದ ರಾಜಧಾನಿಗೆ ಕ್ಲಾಸಿಕ್ ಬಸ್ ಸಂಚಾರ ನಡೆಸಲಿದೆ ಅಶ್ವಮೇಧ ಕ್ಲಾಸಿಕ್ ಬಸ್ ಗಳಲ್ಲೂ ಕೂಡ ಮಹಿಳೆಯರಿಗೆ ಫ್ರೀ ಟಿಕೆಟ್ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *