October 12, 2025
WhatsApp Image 2024-02-05 at 11.53.18 AM

ಸುಳ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸುಳ್ಯ ಮಂಡಲ ಅಧ್ಯಕ್ಷ ಪಟ್ಟ ಮತ್ತೆ ವೆಂಕಟ್ ವಳಲಂಬೆಗೆ ದೊರೆತಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದಿದ್ದಿದೆ. ಈ ಹಿನ್ನೆಲೆಯಲ್ಲೆ ಬಿಜೆಪಿ ಕಛೇರಿಗೆನೇ ಕಾರ್ಯಕರ್ತರು ಬೀಗ ಜಡಿದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಮರು ನೇಮಕ ಮಾಡಲಾಗಿತ್ತು. ಹಾಲಿ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ವಿಧಾನ ಸಭಾ ಚುನಾವಣೆಯ ವೇಳೆ ಎಸ್. ಅಂಗಾರ ಅವರಿಗೆ ಟಿಕೆಟ್ ನಿರಾಕರಿಸಿದಕ್ಕೂ ಮೊದಲೇ ಅಸಮಾಧಾನ ಇದ್ದ ಬಿಜೆಪಿಯ ಕಾರ್ಯಕರ್ತರು ಪಕ್ಷದ ದೋರಣೆಯಿಂದ ಬೇಸೆತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವೆಂಕಟ್ ವಳಲಂಬೆಯವರನ್ನು ಎರಡನೇ ಬಾರಿಗೆ ಸುಳ್ಯ ಮಂಡಲ ಸಮಿತಿಗೆ ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ಪ್ರಮುಖರು ಸಭೆ ನಡೆಸಿ ಕೋರ್ ಕಮಿಟಿ ಶಿಫಾರಸ್ಸು ಮಾಡಿದವರನ್ನು ಅಧ್ಯಕ್ಷರನ್ನಾಗಿ ಮಾಡದಿರುವುದು ಖಂಡನೆ ವ್ಯಕ್ತವಾಗಿದೆ. ಭಾನುವಾರ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿ ಕಚೇರಿಯಲ್ಲಿ ಕ್ಷೇತ್ರದ ಪ್ರಮುಖರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಮಂಡಲ ಸಮಿತಿಯಿಂದ ಅಧ್ಯಕ್ಷ ಸ್ಥಾನಕ್ಕೆ ವಿನಯ ಮುಳುಗಾಡು ಅವರ ಹೆಸರನ್ನು ಜಿಲ್ಲಾ ಸಮಿತಿಗೆ ಕಳುಹಿಸಲಾಗಿತ್ತು ಆದ್ರೆ ಪಟ್ಟಿಯಲ್ಲಿ ಕಾಣಿಸದೇ ಇದ್ದ ವೆಂಕಟ್ ವಳಲಂಬೆಯವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೆಲವು ಕಾರ್ಯಕರ್ತರು ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ. ಜೊತೆಗೆ ಪಕ್ಷದಲ್ಲಿ ಹಲವು ವರ್ಷಗಳಿಂದ ನಿಷ್ಠೆಯಿಂದ ದುಡಿಯುತ್ತಿರುವ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

About The Author

Leave a Reply