
ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ನಡೆದಿದೆ.



ಶೋಭಾ (45) ಮಗನಿಂದ ಕೊಲೆಯಾದ ತಾಯಿ. ಅನಿಲ್ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿ.
ಕಂಠಪೂರ್ತಿ ಕುಡಿದು ಬಂದು ತಾಯಿ ಜೊತೆ ಜಗಳವಾಡಿದ್ದ ಅನಿಲ್, ತನಗೆ ಯಾಕೆ ಮದುವೆ ಮಡಿಸಿಲ್ಲ ಎಂದು ಪ್ರಶ್ನಿಸಿದ್ದಾನೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಅಲ್ಲಿಯೇ ಇದ್ದ ಇಟ್ಟಿಗೆಯಿಂದ ತಾಯಿಯನ್ನು ಹೊಡೆದು ಕೊಲೆ ಮಾಡಿದ್ದಾನೆ.
ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.