Visitors have accessed this post 716 times.
ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆಬ್ರವರಿ12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಆರೋಪಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು.