
ವಿಟ್ಲ: ಕರ್ಣಾಟಕ ಬ್ಯಾಂಕ್ ಗೆ ಕಳ್ಳರು ನುಗ್ಗಿ ಚಿನ್ನ ಮತ್ತು ನಗದು ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ನಡೆದಿದೆ.



ಎಷ್ಟು ಮೌಲ್ಯದ ಚಿನ್ನ ಹಾಗೂ ಹಣ ಲೂಟಿದ್ದಾರೆ ಎಂಬುದು ಇನ್ನಷ್ಟೆ ತಿಳಿಯಬೇಕಾಗಿದೆ. ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ ನಿರೀಕ್ಷಕರಾದ ನಾಗರಾಜ್ ಹೆಚ್.ಇ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳು ಬರುವ ಸಾಧ್ಯತೆ ಇದೆ.