ಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ವತಿಯಿಂದ ನಾಳೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ‘ ಒಳ ನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿ ಎಂಬ ಘೋಷಣೆ ಯೊಂದಿಗೆ 1991 ರ ಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ದಿನಾಂಕ 09.02.2024 ಶುಕ್ರವಾರ ಮಧ್ಯಾಹ್ನ ಮೂರುವರೆ ಗಂಟೆಗೆ ಮಂಗಳೂರಿನ ಮಿನಿ ವಿಧಾನಸೌದದ ಮುಂಭಾಗ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಇವರ ನೇತ್ರತ್ವದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ‌. ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಹಾಗು ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಪರಂಗಿಪೇಟೆಯವರು ಆಗಮಿಸಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ .

ಎಲ್ಲ ಸಂವಿಧಾನ ಪ್ರೇಮಿ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕೆಂದು ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಜಮಾಲ್ ಜೋಕಟ್ಟೆ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *