
ಚಿತ್ರದುರ್ಗದ (Chitradurga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿದೆ.



ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ , ರೋಗಿಯೊಬ್ಬರನ್ನು ಬೆಡ್ ಮೇಲೆ ಮಲಗಿಸಿ, ಆಪರೇಷನ್ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ.
ಅಂತಿಮವಾಗಿ ಆಪರೇಷನ್ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ವಿಡಿಯೋ ಈಗ ವೈರಲ್ ಆಗಿದೆ.