ಮುಸ್ಲಿಂ ಯುವಕನಿಂದ ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂಪರ ಕಾರ್ಯಕರ್ತರು ರೂಮ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅನ್ಯ ಕೋಮಿನ ಯುವಕ ಹಾಗೂ ವಿಹೆಚ್ಪಿ ಕಾರ್ಯಕರ್ತನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿ ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಲ್ದೂರು ಪಟ್ಟಣದಲ್ಲಿ ನಡೆದಿದೆ.
ಯುವಕನಿಗೆ ರೂಂನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ ಆರೋಪದ ಮೇಲೆ ವಿಹೆಚ್ಪಿ ಜಿಲ್ಲಾ ಸಂಚಾಲಕ ಸೇರಿ ಒಟ್ಟು 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇನ್ನು ಅನ್ಯಕೋಮಿನ ಯುವಕನ ಮೇಲೆ ಪೋಕ್ಸೋ ಅಡಿಯಲ್ಲಿ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧಿಸಿದಂತೆ ಎಲ್ಲರನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ದೂರು ಪಟ್ಟಣದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ. ಪಟ್ಟಣದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.