October 27, 2025
WhatsApp Image 2024-02-10 at 1.36.31 PM

ಮಂಗಳೂರು: ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರು ನೋಟಿಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಹಾಗೂ ವೇಣೂರು ವಲಯ ಮುಖಂಡ ಯಶೋಧರ ಗಡಿಪಾರು ನೋಟೀಸ್ ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

 

ಇಬ್ಬರನ್ನೂ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ ನೋಟಿಸ್ ಜಾರಿ ಮಾಡಿದ್ದರು. ಇದನ್ನು ಪ್ರಶ್ನಿಸಿ ದಿನೇಶ್ ಪಂಜಿಗ ಹಾಗೂ ಯಶೋಧರ, ಪುತ್ತೂರು ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ನೋಟಿಸ್ ಜಾರಿ ಕ್ರಮ ಸರಿಯಿಲ್ಲ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದಾರೆ. ಅರ್ಜಿದಾರರ ಪರ ವಾದ ಪುರಸ್ಕರಿಸಿದ ಕೋರ್ಟ್ ಗಡಿಪಾರು ನೋಟಿಸ್ ಗೆ ತಡೆಯಾಜ್ಞೆ ನೀಡಿದೆ.

About The Author

Leave a Reply