Visitors have accessed this post 352 times.
ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಂಕರ್ ಲಾರಿಗಳೆರಡು ಮುಖಾಮುಖಿಯಾಗಿ ಡಿಕ್ಕಿಯಾಗಿ, ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗೊಂಡಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ಬಂಟ್ವಾಳ – ವಿಲ್ಲಾಂಪುರ ರಾಷ್ಟ್ರೀಯ ಹೆದ್ದಾರಿಯ ಪರ್ಲ ಎಂಬಲ್ಲಿ ನಡೆದಿದೆ.
ಬಂಟ್ವಾಳ ಸಮೀಪದ ಪರ್ಲ ಎಂಬಲ್ಲಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಅಲ್ಪಸ್ವಲ್ಪ ಪ್ರಮಾಣದ ಗಾಯಗಳೊಂದಿಗೆ ಪಾರಾಗಿದ್ದಾರೆ.
ಇನ್ನು ಪರ್ಲ ನಿವಾಸಿ ಭುಜಂಗ ಮೂಲ್ಯ ಎಂಬವರ ಮನೆಗೆ ಬಸ್ ನುಗ್ಗಿದ ಪರಿಣಾಮ ಮನೆಗೆ ಸ್ವಲ್ಪ ಹಾನಿಯಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎ.ಎಸ್.ಐ.ವಿಜಯ್ ಸಿಬ್ಬಂದಿಗಳಾದ ರಮೇಶ್, ರಾಜುಪೂಜಾರಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.