Visitors have accessed this post 191 times.

ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: ಗೆಹ್ಲೊಟ್

Visitors have accessed this post 191 times.

ಬೆಂಗಳೂರು: ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಸ್ಟೋಟ್ ಅವರು ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ ವೇಳೆ ಹೇಳಿದ್ದಾರೆ.
ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.
ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ರಾಜ್ಯಪಾಲರು ಹೇಳಿದರು.
ಹೊಸ ಸರ್ಕಾರ ರಚನೆಯಾದ ನಂತರ ಕಂದಾಯ ಇಲಾಖೆಯ ಜಿಲ್ಲಾಧಿಕಾರಿ ಉಪವಿಭಾಗಾಧಿಕಾರಿಗಳಲ್ಲಿ ಒಟ್ಟು 93,350 ಪ್ರಕರಣಗಳು ಬಾಕಿ ಇನ್ನು ಈ ಪೈಕಿ 2024 ರ ಫೆಬ್ರವರಿ 5 ರ ವರೆಗೆ 84253 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 5787 ಪ್ರಕರಣಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದೆ.

Leave a Reply

Your email address will not be published. Required fields are marked *