ಮುಂಬೈ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ಪಕ್ಷಾಂತರ ಪರ್ವ ಜೋರಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುಡ್‌ಬೈ ಹೇಳಿರುವ ಅಶೋಕ್ ಚೌಹಾಣ್ ಅವರ ನಡೆ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಪಕ್ಷದ ಜೊತೆಗೆ ಶಾಸಕ ಸ್ಥಾನಕ್ಕೂ ತಮ್ಮ ರಾಜೀನಾಮೆಯಲ್ಲಿ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ಗೆ ಸಲ್ಲಿಸಿದ್ದಾರೆ.
‘ಇಂಡಿಯಾ’ ಮೈತ್ರಿಕೂಟಕ್ಕೆ ಬಿಗ್‌ಶಾಕ್! ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಬಿಹಾರದಲ್ಲಿ JDU, ಪಶ್ಚಿಮಬಂಗಾಳದಲ್ಲಿ TMC, ಪಂಜಾಬ್ ಹಾಗೂ ದೆಹಲಿಯಲ್ಲಿ AAP ಇಂಡಿಯಾ ಮೈತ್ರಿಕೂಟದಿಂದ ದೂರ ಸರಿಯುತ್ತಿವೆ. ಈ ರಾಜಕೀಯದ ಬೆಳವಣಿಗೆಯ ಮಧ್ಯೆ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಮಹಾ ನಾಯಕರು ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಅದೃಷ್ಟ ಪರೀಕ್ಷೆಯಲ್ಲಿ ಗೆಲ್ತಾರಾ ನಿತೀಶ್ ಕುಮಾರ್.. ಬಿಹಾರ ಅಸೆಂಬ್ಲಿಯಲ್ಲಿ ಯಾರಿಗೆ ಎಷ್ಟು ಸಂಖ್ಯಾಬಲ? ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿರುವ ಅಶೋಕ್ ಚೌಹಾಣ್ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ. ತಮ್ಮ ಜೊತೆಗೆ ಕಾಂಗ್ರೆಸ್‌ನ ಕೆಲವು ಶಾಸಕರನ್ನು ಬಿಜೆಪಿ ಪಕ್ಷಕ್ಕೆ ಕರೆದುಕೊಂಡು ಹೋಗುವ ಮುನ್ಸೂಚನೆಯನ್ನು ನೀಡಿದ್ದಾರೆ. ಅಶೋಕ್ ಚೌಹಾಣ್ ಅವರ ಈ ರಾಜಕೀಯ ನಡೆಯಿಂದ ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷಕ್ಕೆ ಅತಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ