ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅಮಾನತು

ಮಂಗಳೂರು: ತರಗತಿಯಲ್ಲಿ ಪಾಠ ಮಾಡುವ ವೇಳೆ ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.

ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಪೋಷಕರ ಬಳಿ ಹೇಳಿದ್ದರು. ಇದು ವಿವಾದಕ್ಕೆ ಕಾರಣಾಗಿತ್ತು. ಇನ್ನು ಶಿಕ್ಷಕಿಯ ಮಾತಿಗೆ ಹಿಂದೂ ಸಂಘಟನೆಗಳು ರಾಜಕೀಯ ಮುಖಂಡರು ಆಕ್ರಶ ವ್ಯಕ್ತಪಡಿಸಿ ಶಿಕ್ಷಕಿಯ ಅಮಾನತಿಗೆ ಆಗ್ರಹಿಸಿದ್ದರು. ಇಂದು ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದು. ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು.ಈ ವೇಳೆ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾ ನಿರತ ಪೋಷಕರ ಮುಂದೆ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿದ್ದಾಗಿ ತಿಳಿಸಿದರು.

ಮುಖ್ಯ ಶಿಕ್ಷಕಿ ಅಮಾನತು ಆದೇಶ ಓದುವ ವೇಳೆ ಹಿಂದೂ ಕಾರ್ಯಕರ್ತರು ಹಾಗೂ ಪೋಷಕರು ಮತ್ತೆ ರೊಚ್ಚಿಗೆದಿದ್ದಾರೆ. ಮುಖ್ಯಶಿಕ್ಷಕಿ‌ ಮತ್ತು ಶಾಲಾ ಆಡಳಿತಕ್ಕೆ ಶಾಸಕರು ಹಿಗ್ಗಾಮುಗ್ಗಾವಾಗಿ ತರಾಟೆಗೆ ತೆಗೆದುಕೊಂಡರು. ನೀವು ನಿಮ್ಮ ತಪ್ಪು ಒಪ್ಪಿಕೊಳ್ಳದೇ ಇದ್ದರೆ ನಾವು ಬಿಡಲ್ಲ. ನಿಮ್ಮ ದಾರಿಗೆ ನಿಮಗೆ, ನಮ್ಮ ದಾರಿ ನಮಗೆ ಅಂತ ಕಾಮತ್ ಎಚ್ಚರಿಕೆ ನೀಡಿದರು.

Leave a Reply