Visitors have accessed this post 336 times.
ಉಡುಪಿ : ಮಲ್ಪೆಯ ನೇಜಾರಿನ ಒಂದೇ ಕುಟುಂಬದ ನಾಲ್ಕು ಮಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ.
ಈ ಬಗ್ಗೆ ಇಂದು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕೆ. ಅವರು, ಮಲ್ಪೆಯ ನಾಲ್ಕು ಮಂದಿ ಕೊಲೆ ಪ್ರಕರಣದಲ್ಲಿ ಆರೋಪಿತನಾಗಿದ್ದ ಪ್ರವೀಣ್ ಚೌಗಲೇ ಎಂಬಾತನನ್ನು ನ.15 ರಂದು ಬಂದಿಸಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಲಾಗಿದ್ದು, ಎಲ್ಲಾ ಸಾಕ್ಷಿಗಳು ಹಾಗೂ ಎಫ್‍ಎಸ್‍ಎಲ್ ವರದಿಗಳು ಬಂದಿದೆ. ಈ ಎಲ್ಲಾ ಮಾಹಿತಿಗಳನ್ನು ಕ್ರೋಡೀಕರಿಸಿ ವಿಶೇಷ ಸರಕಾರಿ ಅಭಿಯೋಜಕರ ಸಲಹೆ ಪಡೆದು ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ದೋಷಾರೋಪಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆ ಆದಷ್ಟು ಬೇಗ ಆರಂಭಿಸಿಲು ಮನವಿ ಮಾಡಿಕೊಂಡಿದ್ದು, ಶೀಘ್ರದಲ್ಲೇ ವಿಚಾರಣೆ ನಡೆಸಲಿದ್ದೇವೆ ಎಂದರು.