ಮಾಜಿ ಪ್ರಧಾನಿ ದೇವೇಗೌಡ ದಿಢೀರ್‌ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

90 ವರ್ಷದ ದೇವೇಗೌಡರಿಗೆ ಗುರುವಾರ ಬೆಳಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದರು ಎನ್ನಲಾಗಿದೆ.

ದೇವೇಗೌಡರು ಆರೋಗ್ಯವಾಗಿಯೇ ಇದ್ದಾರೆ. ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೀಗಾಗಿ ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಅವರು ಆಹಾರ ಸೇವನೆ ಮಾಡುತ್ತಿದ್ದಾರೆ, ಅವರ ಉಸಿರಾಟವೂ ಸಹಜ ಸ್ಥಿತಿಗೆ ಬರುತ್ತಿದೆ ಎಂದು ತಿಳಿದುಬಂದಿದೆ.

Leave a Reply