
ಉಪ್ಪಿನಂಗಡಿ:ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಮೂವತ್ತ ನಾಲ್ಕನೇ ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.



ಉದ್ಯಮಿ ದಾವುದ್ ಅವರ ಪುತ್ರಿ ಹಫೀಜಾ(17) ಮೃತಪಟ್ಟವರು. ಮನೆಯಲ್ಲಿ ಮಲಗಿದ್ದ ವಿದ್ಯಾರ್ಥಿನಿ ಹಫೀಜಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಹಫೀಜಾ ಬುಧವಾರ ತಡರಾತ್ರಿವರೆಗೆ ಓದಿದ್ದಾರೆ. ಗುರುವಾರ ಬೆಳಗ್ಗೆ ಆಕೆ ಏಳದೇ ಇರುವುದನ್ನು ಗಮನಿಸಿದ ಮನೆಯವರು ಎಬ್ಬಿಸಲು ಹೋದಾಗ ಮಲಗಿದಲ್ಲೇ ಮೃತಪಟ್ಟಿರುವುದು ಕಂಡುಬಂದಿತು. ಮೃತರು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.