ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ..!

ಕಾಸರಗೋಡು: ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಞಿಂಗಾಡ್ ನಲ್ಲಿ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೂರ್ಯ ಪ್ರಕಾಶ್ (55), ಪತ್ನಿ ಗೀತಾ (48) ಮತ್ತು ಸೂರ್ಯ ಪ್ರಕಾಶ್ ರವರ ತಾಯಿ ಲೀಲಾ (90) ಮೃತ ಪಟ್ಟವರು.

ಸೂರ್ಯ ಪ್ರಕಾಶ್ ಕಾಞಿಂಗಾಡ್ ನಲ್ಲಿ ವಾಚ್ ವರ್ಕ್ಸ್ ಮಳಿಗೆ ನಡೆಸುತ್ತಿದ್ದರು. ರೈಲ್ವೆ ನಿಲ್ದಾಣ ಪರಿಸರದ ಅವಿಕ್ಕರೆಯಲ್ಲಿರುವ ವಸತಿ ಗೃಹದಲ್ಲಿ ಮೃತದೇಹ ಪತ್ತೆಯಾಗಿದೆ. ಮಾಹಿತಿ ತಿಳಿದು ಹೊಸದುರ್ಗ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಸೂರ್ಯ ಪ್ರಕಾಶ್ ರವರ ಪುತ್ರ ಅಜಯ್ ಉದ್ಯೋಗ ನಿಮಿತ್ತ ಎರ್ನಾಕುಲಂಗೆ ತೆರಳಿದ್ದರು. ಇಬ್ಬರು ಹೆಣ್ಮಕ್ಕಳು ವಿವಾಹವಾಗಿದ್ದಾರೆ.

ಮನೆಯಲ್ಲಿ ಮೂವರು ಮಾತ್ರ ಇದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Leave a Reply