ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರೂ, ಬಂಟ್ವಾಳ ಪುರಸಭಾ ಸದಸ್ಯರೂ, ಸಾಮಾಜಿಕ ಹೋರಾಟಗಾರ ಮೂನಿಷ್ ಆಲಿ ಅವರಿಗೆ ಸಮಾಜ ಘಾತುಕ ಶಕ್ತಿಗಳಿಂದ ಕೊಲೆ ಬೆದರಿಕೆ ಬಂದಿದ್ದು, ಈ ಪ್ರಕರಣವನ್ನು ಪೊಲೀಸ್ ಇಲಾಖೆ ಸೂಕ್ತವಾಗಿ ತನಿಖೆ ನಡೆಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಇದರ ಗಾಂಭೀರ್ಯತೆಯನ್ನು ಅರಿತು ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸುವ ಮೂಲಕ ಇದರ ಹಿಂದೆ ಇರುವ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದೂ ಆಗ್ರಹಿಸಿದ್ದಾರೆ.