ಕಾಸರಗೋಡು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾಞಂಗಾಡ್ ನ ಪೆರಿಯದಲ್ಲಿ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ- ಇಬ್ಬರು ಮೃತ್ಯು,,!
ಮೃತಪಟ್ಟವರನ್ನು ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಎಂದು ಗುರುತಿಸಲಾಗಿದೆ. ರಾಹುಲ್ ಮತ್ತು ರಾಜೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬೇಕಲ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.