
ಪುತ್ತೂರು: ಮುಕ್ರಂಪಾಡಿ ಜಂಕ್ಷನ್ ನಲ್ಲಿ ತಡರಾತ್ರಿ ಅನುಮಾನಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.



ಕಾರಿನಲ್ಲಿದ್ದ ಗೋಳ್ತಮಜಲು ಗ್ರಾಮ, ಬಂಟ್ವಾಳ ನಿವಾಸಿ ಕಿಶೋರ್ (36), ಕಬಕ ಗ್ರಾಮ, ಪುತ್ತೂರು ನಿವಾಸಿ ಮನೋಜ್ (23), ಕಬಕ ಗ್ರಾಮ, ಪುತ್ತೂರು ನಿವಾಸಿ ಆಶಿಕ್ (28) ಮತ್ತು ಪಡ್ನೂರು ಗ್ರಾಮ, ಪುತ್ತೂರು ನಿವಾಸಿ ಸನತ್ ಕುಮಾರ್ (24) ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ, ಪುತ್ತೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳೊಂದಿಗೆ, ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ, ಕಾರಿನಲ್ಲಿ ಒಂದು ತಲವಾರು ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಹಾಗೂ ಕಾನೂನುಕ್ರಮಕ್ಕಾಗಿ ಕಾರಿನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 17/2024 ಕಲಂ: 25 (1B) (b) ARMS Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.