ಬಸ್ ತಡೆದು ಅಪ್ರಾಪ್ತೆ ಕತ್ತುಕೊಯ್ದು ಯುವಕರು ಪರಾರಿ

ಅಪ್ರಾಪ್ತೆ ತೆರಳುತ್ತಿದ್ದಂತ ಬಸ್ಸನ್ನು ತಡೆದು, ಆಕೆಯ ಕತ್ತುಕೊಯ್ದು ಪರಾರಿಯಾಗಿರೋ ಘಟನೆ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಅಟ್ಟೂರು ಕ್ರಾಸ್ ಬಳಿಯಲ್ಲಿ ಬೆಳಮಗಿ ಗ್ರಾಮದಿಂದ ವಿಕೆ ಸಲಗಕ್ಕೆ ಅಪ್ರಾಪ್ತೆಯೊಬ್ಬರು ತೆರಳುತ್ತಿದ್ದರು.

ಇಂತಹ ಬಸ್ ಅನ್ನು ಬೈಕ್ ನಲ್ಲಿ ಹಿಂಬಾಲಿಸಿ ತೆರಳಿದಂತ ಯುವಕರು, ನಿಲ್ಲಿಸಿ ಅಪ್ರಾಪ್ತೆಯ ಕತ್ತು ಕೊಯ್ದು ಪರಾರಿಯಾಗಿರೋದಾಗಿ ತಿಳಿದು ಬಂದಿದೆ.

ತೀವ್ರವಾಗಿ ಗಾಯಗೊಂಡಿದ್ದಂತ ಅಪ್ರಾಪ್ತೆಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಪ್ರಾಪ್ತೆಯ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ನರೋಣ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದೆಲ್ಲವೂ ಸಿನಿಮೀಯ ರೀತಿಯಲ್ಲಿ ನಡೆದಿದ್ದು, ಬಸ್ಸಿನಲ್ಲಿದ್ದಂತ ಜನರು ಕಣ್ ಮುಂದೆಯೇ ನಡೆದಂತ ಘಟನೆಯಿಂದ ಬೆಚ್ಚಿ ಬೀಳುವಂತೆ ಮಾಡಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply