August 30, 2025
WhatsApp Image 2024-02-24 at 9.04.56 AM

ಬಂಟ್ವಾಳ : ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್‌ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ ಅನಿಲ್‌ ಜಾನ್‌ ಸಿಕ್ವೆರಾ ಮಂಗಳೂರಿನ ಎಸ್‌ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್‌ಎಲ್​ಬಿ ಪೂರೈಸಿದ್ದಾರೆ. ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಇವರು ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್​ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.

ಕಾನೂನು ಪದವಿ ಬಳಿಕ ಮಂಗಳೂರಿನಲ್ಲಿ ಬಾ‌ರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟಿಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ರೊಂದಿಗೆ ವೃತ್ತಿ ನಿರ್ವಹಿಸುತ್ತಿದ್ದರು. ಅನಿಲ್ ಜಾನ್ ಸಿಕ್ವೆರಾ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ತಮ್ಮ ಎರಡನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ.

ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೆರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆ ಅಧ್ಯಕ್ಷರಾಗಿದ್ದರು. ಅನಿಲ್ ಸಿಕೆರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಸಂದರ್ಶನ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.

About The Author

Leave a Reply