November 8, 2025
WhatsApp Image 2024-02-26 at 11.16.21 AM

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಾರ್ಚ್ 1 ಶುಕ್ರವಾರದಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಪಕ್ಷ ಸಮಾವೇಶ ನಡೆಯಲಿದೆ.

ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಶಾಕೀರ್ ಅಳಕೆ ಮಜಲು, ಜಿಲ್ಲಾ ಸಮಿತಿ ಸದಸ್ಯರಾದ ಅಬುಬಕ್ಕರ್ ಮದ್ದ, ವಿಮ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ವಿಮ್ ಜಿಲ್ಲಾಧ್ಯಕ್ಷೆ ನೌರಿನ್ ಆಲಂಪಾಡಿ ಹಾಗೂ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಭಾಗವಹಿಸಲಿದ್ದಾರೆ.

ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply