ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಆದಿವಾಸಿ ಮಹಿಳೆಯರಿಗೆ ಇದೀಗ ದೆಹಲಿಯ ವಿಮಾನವೇರುವ ಭಾಗ್ಯ ಬಂದೊದಗಿದೆ.
ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಯೋಜನೆಯಡಿ ಸಂಜೀವಿನಿ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಅನುಷ್ಠಾನದಡಿ ಮಾರ್ಚ್ 1 ರಂದು ದೆಹಲಿಯಲ್ಲಿ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾಗಲು ಮತ್ತು ಅಮೃತ್ ಉದ್ಯಾನವನಕ್ಕೆ ಭೇಟಿ ನೀಡಲು ತೆರಳುತ್ತಿರುವ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮ ಪಂಚಾಯತ್ ನ ಸಂಜೀವಿನಿ ಸ್ವ ಸಹಾಯ ಸಂಘದ ಬುಡಕಟ್ಟು ಮಹಿಳಾ ಸದಸ್ಯೆಯಾದ ಶ್ರೀಮತಿ ಸುಂದರಿ ಇವರನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇಖಾ ರಮೇಶ್ ಇವರು ಅಭಿನಂದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕೆ.ಪಿ ಅಬ್ದುಲ್ ರಹಿಮಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ, ಪಂಚಾಯತ್ ಕಾರ್ಯದರ್ಶಿ ಕರೀಂ, ಸಂಜೀವಿನಿ ಸ್ವ ಸಹಾಯ ಸಂಘದ ಎಂ.ಬಿ.ಕೆ ಮಮತಾ, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕರ್ನಾಟಕದಿಂದ ಒಟ್ಟು 35 ಮಂದಿ
ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕದಿಂದ ಒಟ್ಟು 35 ಮಂದಿ ದೆಹಲಿಗೆ ತೆರಳಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೀನಾಕ್ಷಿ, ವನಿತಾ, ಬೆಳ್ತಂಗಡಿ ತಾಲೂಕಿನ ಲಕ್ಷ್ಮೀ, ಬಂಟ್ವಾಳ ತಾಲೂಕಿನ ಸುಂದರಿ ದೆಹಲಿ ಪ್ರವಾಸ ಭಾಗ್ಯ ಪಡೆದವರು.