
ನವದೆಹಲಿ : ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಬೌಇಸಿದ್ದು, ಪಿಕಪ್ ವ್ಯಾನ್ ಪಲ್ಟಿಯಾಗಿ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.



ಮಧ್ಯ ಪ್ರದೇಶದ ದಿಂಡೋರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 14 ಜನರು ಸಾವನ್ನಪ್ಪಿದ್ದಾರೆ. 21 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬದ್ಜಾರ್ ಘಾಟ್ ಮತ್ತು ಬಿಚಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.
ಮೃತರು ಮನೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಗಾಯಾಳುಗಳು ಶಹಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಃಇತಿ ನಿರೀಕ್ಷಿಸಲಾಗಿದೆ.