ಸರ್ಕಾರಿ ಆಸ್ಪತ್ರೆಯಿಂದ 200 ಮೀ. ಒಳಗಿನ ಖಾಸಗಿ ಲ್ಯಾಬ್‌ ಬಂದ್‌ : ಸರ್ಕಾರ ಖಡಕ್‌ ಆದೇಶ

ಸರ್ಕಾರಿ ವೈದ್ಯರ ಜೊತೆ ಹೊಂದಾಣಿಕೆ ಮಾಡಿಕೊಂಡು ಆಸ್ಪತ್ರೆ ಪಕ್ಕದಲ್ಲೇ ಖಾಸಗಿಯವರು ಲ್ಯಾಬೋರೇಟರಿಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಸರ್ಕಾರ ಆಸ್ಪತ್ರೆಗೆ ಹೋಗುವ ಜನರಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಾಗಿ ಖಾಸಗಿ ಲ್ಯಾಬೋರೇಟರಿಗೆ ಕಳುಹಿಸುತ್ತಾರೆ.

ಈ ಮೂಲಕ ಸಾರ್ವಜನಿಕರಿಂದ ಹಣ ವಸೂಲಿ ದಂಧೆ ನಡೆಯುತ್ತಿದ್ದು, ಇದೀಗ ಇದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಸರ್ಕಾರಿ ಆಸ್ಪತ್ರೆಯಿಂದ 200 ಮೀಟ‌ರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳನ್ನು ಪರಿಶೀಲನೆ ನಡೆಸಿ, ಹಾಲಿ ಇರುವ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಲ್ಲಿ ಅವುಗಳನ್ನು ಮುಚ್ಚಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ದೂರದೊಳಗೆ ಯಾವುದೇ ಹೊಸ ಖಾಸಗಿ ಚಿಕಿತ್ಸಾ ಪ್ರಯೋಗಾಲಯಕ್ಕೆ ಅನುಮತಿಯನ್ನು ನೀಡುವಂತಿಲ್ಲ. . ಇಷ್ಟಾದರೂ ಕೆಲವು ಖಾಸಗಿ ಲ್ಯಾಬೋರೇಟರಿಗಳು ತಲೆ ಎತ್ತಿವೆ ಎಂಬ ದೂರುಗಳು ಸಾಕಷ್ಟು ಬಂದಿವೆ. ಈ ಹಿನ್ನೆಲೆಯುಲ್ಲಿ ಈಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ.

Leave a Reply