February 18, 2026
WhatsApp Image 2024-02-08 at 8.56.02 AM

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗುಲೆಯನ್ನು ಮಾರ್ಚ್ 7ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ. ದೋಷಾರೋಪ ವಾಚಿಸುವ ಪ್ರಕ್ರಿಯೆಗೆ ಪೂರ್ವಭಾವಿ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ನ್ಯಾಯಾಲಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದೆ.ಅದರಂತೆ ಆರೋಪಿಯನ್ನು ಆ ದಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

About The Author

Leave a Reply