
ಮಗು ಅತ್ತಿದ್ದಕ್ಕೆ ಪಾಪಿ ತಂದೆಯೋರ್ವ ಮಗುವನ್ನು ಗೋಡೆಗೆ ಎತ್ತಿ ಬಿಸಾಡಿದ ಹೃದಯವಿದ್ರಾವಕ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಗು ಇದೀಗ ಮೃತಪಟ್ಟಿದೆ.



ರಾತ್ರಿ ಮಗು ಅತ್ತು ಗಲಾಟೆ ಮಾಡಿದ್ದಕ್ಕೆ ಕುಡಿದ ಮತ್ತಿನಲ್ಲಿ ತಂದೆ ಶಂಬುಲಿಂಗಯ್ಯ ಶಾಪುರಮಠ ಎಂಬಾತ ಮಗುವಿನ ಕಾಲು ಹಿಡಿದು ಗೋಡೆಗೆ ಎಸೆದಿದ್ದಾನೆ, ಪರಿಣಾಮ ಮಗುವಿನ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಮಗು ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.
ಸದ್ಯ ಕುಟುಂಬಸ್ಥರು ಗರಗ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ, ಪಾಪಿ ತಂದೆ ಶಂಬುಲಿಂಗಯ್ಯನನ್ನು ಬಂಧಿಸಿದ್ದಾರೆ.