ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯನ್ನು ಮಾ. 7ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ದೋಷಾರೋಪ ವಾಚಿಸುವ ಪ್ರಕ್ರಿಯೆಗೆ ಪೂರ್ವಭಾವಿ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ನ್ಯಾಯಾಲಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.