
ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ಮುವತ್ತೊಕ್ಲುವಿನಲ್ಲಿ ನಿನ್ನೆಸಂಜೆ ನಡೆದಿದೆ.



ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಪ್ರವೀಣ್ ಎಂದು ಹೇಳಲಾಗುತ್ತಿದ್ದು, ಸಿಂಗಲ್ ಬ್ಯಾರಲ್ ಗನ್‌ನಿಂದ ಎದೆಗೆ ಗುಂಡು ಹೊಡೆದುಕೊಂಡ ಪ್ರವೀಣ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪ್ರವೀಣ್ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದನು ಎಂದು ಹೇಳಲಾಗುತ್ತಿದೆ. ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನಾ ಸ್ಥಳಕೆ ಮಾದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.