August 30, 2025
WhatsApp Image 2024-03-01 at 1.22.47 PM

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ ಖಂಡಿಸಿ ಬಾವಿಗಿಳಿದು ಧರಣಿ ನಡೆಸಿ ಜೈ ಶ್ರೀರಾಮ್ , ಮೋದಿ, ಎಂದು ಜೈಕಾರ ಕೂಗಿದ ಪ್ರತಿಪಕ್ಷ ಬಿಜೆಪಿ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಜೈ ಸೀತಾರಾಮ್’ ಎಂದು ಘೋಷಣೆ ಕೂಗಿ ಟಾಂಗ್ ಕೊಟ್ಟ ಪ್ರಸಂಗ ನಡೆಯಿತು.

 

ಮಾತೆತ್ತಿದರೆ ಜೈಶ್ರೀರಾಮ್ ಎನ್ನುತ್ತಾರೆ. ನಾವೇನು ರಾಮನ ಭಕ್ತರಲ್ಲವೆ? ನಮ್ಮ ಊರಿನಲ್ಲಿ ಎರಡು ರಾಮಮಂದಿರ ಕಟ್ಟಿಸಿದ್ದೇನೆ. ನಾನು ರಾಮನ ಭಕ್ತನಲ್ಲವೇ? ಇವರು ರಾಮ- ಸೀತೆಯರನ್ನು ಬೇರೆ ಮಾಡಿದ್ದಾರೆ. ಮಹಾತ್ಮಾಗಾಂಧೀಜಿ ಹೇಳಿದ ಸೀತಾರಾಮನಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು.

ಗುರುವಾರ ಬಜೆಟ್ ಮೇಲಿನ ಚರ್ಚೆ ವೇಳೆ ಸಿಎಂಸಿದ್ದರಾಮಯ್ಯ ಉತ್ತರ ನೀಡಲು ಆರಂಭಿಸಿದ ವೇಳೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಅಡ್ಡಿಪಡಿಸಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ‘ಜೈ ಸೀತಾರಾಮ್’ ಎಂದರು. ಈ ಮೂಲಕ ಕೇಂದ್ರ, ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರನ್ನು ಪರೋಕ್ಷವಾಗಿ ಉಲ್ಲೇಖಿಸಿ ಅವರು ರಾಜ್ಯದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಅನುದಾನ ನೀಡುತ್ತಿಲ್ಲ ಎಂದು ತಿರುಗೇಟು ನೀಡಿದರು.

About The Author

Leave a Reply